ಸಿಡ್ನಿ: ತನ್ನ ಕ್ರಿಕೆಟ್ ಅಧ್ಯಾಯ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂದಿರುವ ಆಸ್ಟ್ರೇಲಿಯದ ಎಡಗೈ ಆರಂಭಕಾರ ಡೇವಿಡ್ ವಾರ್ನರ್, ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಆಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯ ಕಳೆದ ವರ್ಷ ಏಕದಿನ ವಿಶ್ವಕಪ್ ಗೆದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟಿಗೆ ವಿದಾಯ ಘೋಷಿಸಿದ್ದರು.ಜನವರಿಯಲ್ಲಿ ಪಾಕ್ ವಿರುದ್ಧ ಕೊನೆಯ ಟೆಸ್ಟ್ ಆಡಿದ್ದರು.
ಅಂತಿಮ ಟಿ20 ಪಂದ್ಯವನ್ನು ಕಳೆದ ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಆಡಿದ್ದರು. ಫ್ರಾಂಚೈಸಿ ಕ್ರಿಕೆಟ್ನಲ್ಲಷ್ಟೇ ಆಡುವುದಾಗಿ ಘೋಷಿಸಿದ್ದರು. ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಕುರಿತು ಹೇಳಿಕೊಂಡಿದ್ದಾರೆ.