ವಡೋದರಾ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 358 ರನ್ ಗಳಿಸಿ ದಾಖಲೆ ನಿರ್ಮಿಸಿದೆ. ಸ್ಮೃತಿ ಮಂಧಾನ (53), ಪ್ರತೀಕಾ ರಾವಲ್ (76), ಹರ್ಲಿನ್ ಡಿಯೋಲ್ (115) ಮತ್ತು ಜೆಮಿಮಾ ರಾಡ್ರಿಗಸ್ (52) ಅವರ ಅದ್ಭುತ ಬ್ಯಾಟಿಂಗ್ನಿಂದಾಗಿ ಟೀಂ ಇಂಡಿಯಾ ಇಷ್ಟು ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.
ವಡೋದರಾದ ಕೊಂಟ್ಬಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ದಾಖಲೆಯ ಮೊತ್ತ ಕಲೆಹಾಕಿದೆ. ನಿಗದಿತ 50 ಓವರ್ಗಳಲ್ಲಿ ತಂಡ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 358 ರನ್ ಕಲೆಹಾಕಿದೆ.