ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 474 ರನ್ ಕಲೆಹಾಕಿದ್ದು, ಟೀಂ ಇಂಡಿಯಾದ ದುರ್ಬಲ ಬೌಲಿಂಗ್ ಮತ್ತೊಮ್ಮೆ ಜಗಜ್ಜಾಹೀರಾಗಿದೆ. ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಯಾವುದೇ ವಿಕೆಟ್ ಪಡೆಯದೆ 122 ರನ್ಗಳನ್ನು ಬಿಟ್ಟುಕೊಟ್ಟು ತೀರ ದುಬಾರಿಯಾಗಿದ್ದಾರೆ.
ಮೆಲ್ಬೋರ್ನ್ ಟೆಸ್ಟ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ ಆಸೀಸ್ ಪಡೆ 474 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ. ತಂಡದ ಪರ ಉಸ್ಮಾನ್ ಖವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಬುಶೆನ್ ಅರ್ಧಶತಕ ಗಳಿಸಿದರೆ ಸ್ಟೀವ್ ಸ್ಮಿತ್ ಶತಕ ಬಾರಿಸಿದರು. ಇತ್ತ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಕೂಡ ಬೇಡದ ಶತಕವನ್ನು ತಮ್ಮ ಖಾತೆಗೆ ಹಾಕಿಕೊಂಡರು.
ಮೆಲ್ಬೋರ್ನ್ ಟೆಸ್ಟ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ ಆಸೀಸ್ ಪಡೆ 474 ರನ್?ಗಳ ಬೃಹತ್ ಮೊತ್ತ ಕಲೆಹಾಕಿದೆ. ತಂಡದ ಪರ ಉಸ್ಮಾನ್ ಖವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಬುಶೆನ್ ಅರ್ಧಶತಕ ಗಳಿಸಿದರೆ ಸ್ಟೀವ್ ಸ್ಮಿತ್ ಶತಕ ಬಾರಿಸಿದರು. ಇತ್ತ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಕೂಡ ಬೇಡದ ಶತಕವನ್ನು ತಮ್ಮ ಖಾತೆಗೆ ಹಾಕಿಕೊಂಡರು.
ಮೆಲ್ಬೋರ್ನ್ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಆಸೀಸ್ ಪಡೆ ಇಷ್ಟು ಬೃಹತ್ ಮೊತ್ತ ಕಲೆಹಾಕಲು ಟೀಂ ಇಂಡಿಯಾದ ಬೌಲಿಂಗ್ ವಿಭಾಗವೂ ಒಂದು ಕಡೆ ಕಾರಣವಾಯಿತು. ತಂಡದ ಪರ ಎಂದಿನಂತೆ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಜಸ್ಪ್ರೀತ್ ಬುಮ್ರಾ ನಾಲ್ಕು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮೂರು ವಿಕೆಟ್, ಆಕಾಶ್ ದೀಪ್ ಎರಡು ವಿಕೆಟ್ ಹಾಗೂ ವಾಷಿಂಗ್ಟನ್ ಸುಂದರ್ ಕೂಡ ಒಂದು ವಿಕೆಟ್ ಪಡೆದರು.
ಮೆಲ್ಬೋರ್ನ್ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಆಸೀಸ್ ಪಡೆ ಇಷ್ಟು ಬೃಹತ್ ಮೊತ್ತ ಕಲೆಹಾಕಲು ಟೀಂ ಇಂಡಿಯಾದ ಬೌಲಿಂಗ್ ವಿಭಾಗವೂ ಒಂದು ಕಡೆ ಕಾರಣವಾಯಿತು.
ಮೆಲ್ಬೋರ್ನ್ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ 23 ಓವರ್ಗಳನ್ನು ಬೌಲ್ ಮಾಡಿದ ಸಿರಾಜ್ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಇತ್ತ ರನ್ ನೀಡುವುದರಲ್ಲೂ ದಾರಾಳತೆ ಮೆರೆದ ಸಿರಾಜ್ 100 ಕ್ಕೂ ಅಧಿಕ ರನ್ ಬಿಟ್ಟುಕೊಟ್ಟು ನಾಚಿಕೆಗೇಡಿನ ದಾಖಲೆಯನ್ನೂ ನಿರ್ಮಿಸಿದ್ದಾರೆ.