ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಪಕ್ಷದ ವತಿಯಿಂದ ವಿವಿಧ ವಿಷಯಗಳಿಗೆ ಸಂಬಂಧಪಟ್ಟಂತೆ ಪಕ್ಷದ ಮುಖಂಡರೊಡನೆ ಸರಣಿ ಸಭೆ ನಡೆಸಲು ಮುಂದಾಗಿದ್ದಾರೆ.
ಗ್ರೇಟರ್ ಬೆಂಗಳೂರು ವಿಷಯಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಸಕರೊಂದಿಗೆ ಸಭೆ ನಡೆಸಲಿರುವ ವಿಜಯೇಂದ್ರ ಅವರೊಂದಿಗೆ ಗ್ರೇಟರ್ ಬೆಂಗಳೂರು ಸಂಬಂಧ ಸಾಧಕ ಬಾದಕಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.ತದನಂತರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ಪಕ್ಷದಲ್ಲಿನ ವಿದ್ಯಾಮಾನಗಳು ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಿರುವ ಅವರು ಮುಂದಿನ ತಿಂಗಳಿಂದ ಆರಂಭಗೊಳ್ಳಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಬಹುದಾದ ವಿಷಯಗಳು ಹಾಗೂ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಪಕ್ಷದ ಶಾಸಕರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಿದ್ದಾರೆ.