ಬೆಂಗಳೂರು: ಬಿಎಚ್ ಎಸ್ ಉನ್ನತ ಶಿಕ್ಷಣ ಸಂಸ್ಥೆ ವಿಜಯ ಕಾಲೇಜುವತಿಯಿಂದ ಭಾರಿಸು ಕನ್ನಡ ಡಿಂಡಮವ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿಜಯ ಕಾಲೇಜಿನ ಕಾರ್ಯದರ್ಶಿ ಡಾ.ಸಮೀರ ಸಿಂಹ, ಖ್ಯಾತ ಗಾಯಕ ಆನಂದ ಮೊದಲಗೆರೆ,ಪ್ರಾಂಶುಪಾಲರಾದ ಡಾ.ಕೆ.ಎಸ್.ಸುರೇಶ್, ಉಪ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಭಟ್, ಪ್ರೋ ನಿಷಿತ್ ಬಾನು ಮತ್ತಿತರರು ಭಾಗವಹಿಸಿದ್ದರು. ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಘನ ಸುಪ್ರೀಂ ಕೋರ್ಟ್ನ ತೀರ್ಪಿನನ್ವಯ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲು ಜಾರಿ ಮಾಡುವ ವಿಚಾರದಲ್ಲಿ ವಿವಿಧ ದಲಿತ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿದ್ದ ಮೇರೆಗೆ, ಎರಡು ತಿಂಗಳೊಳಗಾಗಿ ವರದಿ ಸಲ್ಲಿಸಲು ಸರ್ಕಾರ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ರಚಿಸಿರುವುದನ್ನು ಕರ್ನಾಟಕ ರಾಜ್ಯ ಆದಿಜಾಂಬವ ಸಂಘ ಸ್ವಾಗತಿಸುತ್ತದೆ.
-ಜಂಬೂದ್ವೀಪ ಸಿದ್ದರಾಜು ಕಾರ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಆದಿಜಾಂಬವ ಸಂಘ