ಬೆಂಗಳೂರು: ಶಾಲಾ ವಿದ್ಯಾರ್ಥಿನಿ ಮೇಲೆ ಶಿಕ್ಷಕರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.13 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ನಡೆದ ನಂತರ ಒಂದು ತಿಂಗಳ ಕಾಲ ವಿದ್ಯಾರ್ಥಿನಿ ಶಾಲೆಗೆ ಬಂದಿಲ್ಲ.
ಇದನ್ನು ಗಮನಿಸಿದ ಶಾಲಾ ಪ್ರಾಂಶುಪಾಲರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಈ ದುಷ್ಕøತ್ಯ ವೆಸಗಿದ್ದ ಶಿಕ್ಷಕರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಕ್ರಮ ಜರುಗಿಸಲಾಗಿದೆ.ವಿದ್ಯಾರ್ಥಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.