ರಾಜಾಜಿನಗರ ಶ್ರೀಚೈತನ್ಯ ಟೆಕ್ನೋ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ನೆರವೇ ರಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಬಿಬಿಎಂಪಿ ಮಾಜಿ ಸದಸ್ಯರಾದ ದೀಪ ನಾಗೇಶ್ ಶಾಲೆಯ ಪ್ರಾಂಶುಪಾಲ ಶ್ರೀವೀದ್ಯಾರವರು, ಉಪ ಪ್ರಾಂಶುಪಾಲರು ಆತ್ತರ್ ಸುಲ್ತಾನ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಪ್ರಾಂಶುಪಾಲರು ಶ್ರೀ ವಿದ್ಯಾದವರು ಮಾತನಾಡಿ ಮಕ್ಕಳು ನಾಯಕತ್ವ ಗುಣ ಬೆಳಸಲು ವಿದ್ಯಾರ್ಥಿ ನಾಯಕರ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶ ಮತ್ತು ರಾಜ್ಯ ರಾಜಕೀಯ ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ರಂಗದಲ್ಲಿ ವಿದ್ಯಾರ್ಥಿಗಳ ಉತ್ತಮ ನಡವಳಿಕೆ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳ ಆಸಕ್ತಿ ಇರುವ ಕ್ಷೇತ್ರದಲ್ಲಿ ನಮ್ಮ ಶಾಲೆ ಪ್ರೋತ್ಸಹ ಸಹಕಾರ ನೀಡುತ್ತಿದೆ.
ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಮತ್ತು ಜಾನಪದ ಕಲೆ, ಸಂಗೀತ ಸಾಹಿತ್ಯದಲ್ಲಿ ವಿದ್ಯಾರ್ಥಿಗಳನ್ನು ಮಾರ್ಗದರ್ಶನ ನೀಡುವುದು. ಇಂದಿನ ಮಕ್ಕಳು, ಭವಿಷ್ಯದ ಉತ್ತಮ ಪ್ರಜೆಯಾಗಬೇಕು ಎಂದು ಶ್ರೀ ಚೈತನ್ಯ ಟೆಕ್ನೋ ಶಾಲೆಯ ಉದ್ದೇಶವಾಗಿದೆ. ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



