ಇಂಡಿಯಾ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಆಕಾಶ್ ಚೋಪ್ರಾಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದೆ. ಬ್ರಿಸ್ಬೇನ್ನ ಗಾಬ್ಬಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆ ಎಂದು ನಾಯಕ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋತಿದೆ. ಆದರೆ ಈ ಸೋಲು ಅಂತಿಂಥ ಸೋಲಲ್ಲ, ಬದಲಾಗಿ 10 ವಿಕೆಟ್ಗಳ ಹೀನಾಯ ಸೋಲು. ಹೀಗಾಗಿಯೇ ಇದೀಗ ಟೀಮ್ ಇಂಡಿಯಾ ಸೋಲಿನ ಪರಾಮರ್ಶೆ ನಡೆಯುತ್ತಿದೆ. ಅದರಲ್ಲೂ ಭಾರತ ತಂಡದ ಸೋಲಿಗೆ ಕಾರಣಗಳೇನು ಎಂಬ ಚರ್ಚೆಗಳು ಜೋರಾಗಿದೆ. ಈ ಚರ್ಚೆಗಳ ನಡುವೆ ಟೀಮ್ ಇಂಡಿಯಾ ಸೋಲಿಗೆ ಅಸಲಿ ಕಾರಣಗಳೇನು ಎಂಬುದನ್ನು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಬಿಚ್ಚಿಟ್ಟಿದ್ದಾರೆ.