ಕನಕಪುರ: ಸಾತನೂರು ಗ್ರಾಮಾಂತರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಮನಗರ ಜಿಲ್ಲೆಯ ಬಿಜಿಎಸ್ ಕಾಲೇಜಿನಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ಗೀತೆಯಲ್ಲಿ ಸಾತನೂರು ಗ್ರಾಮಾಂತರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಬುದ್ಧ .ಎಸ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ, ರಾಮನಗರ ಶಾಖಾ ಮಠದ ಅನ್ನದಾನೇಶ್ವರ ಸ್ವಾಮಿಗಳು ಪ್ರಬುದ್ಧ .ಎಸ್ ಅವರಿಗೆ ಬಹುಮಾನ ವಿತರಿಸಿದರು.
ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ನಾಗಮ್ಮ ಹಾಗೂ ಸಾತನೂರು ಗ್ರಾಮಾಂತರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಬೋದಕ ಬೋದಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.