ಕಲಬುರಗಿ: ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ(35) ವಿಧಿವಶರಾಗಿದ್ದಾರೆ.ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ ಸಿದ್ದರಾಮಶ್ರೀ ಅವರಿಗೆ ಮುಂಜಾನೆ ಹೃದಯಾಘಾತವಾಗಿದ್ದು ವಿಧಿವಶರಾಗಿದ್ದಾರೆ.
ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.ನಿನ್ನೆ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕ ಬಿ.ಆರ್.ಪಾಟೀಲ್, ಅನೇಕ ಪ್ರಮುಖರು ಭಾಗವಹಿಸಿದ್ದರು.