ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ವಿಶ್ವದಾದ್ಯಂತ ಅಭಿಮಾನಿಗಳಿರುವುದು ಗೊತ್ತೇ ಇದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದಲ್ಲೂ ಸಾಕಷ್ಟು ಅಭಿಮಾನಿಗಳಿರುವುದು ವಿಶೇಷ. ಇದಕ್ಕೆ ಸಾಕ್ಷಿಯೇ ಈ ವಿಡಿಯೋ. ಪಾಕಿಸ್ತಾನ್ ವಿರುದ್ಧ ಕಿಂಗ್ ಕೊಹ್ಲಿ ಭರ್ಜರಿ ಶತಕ ಸಿಡಿಸಿರುವುದನ್ನೇ ಪಾಕ್ನಲ್ಲಿನ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅದು ಸಹ ಪಾಕಿಸ್ತಾನ್ ತಂಡದ ಸೋಲಿನೊಂದಿಗೆ ಎಂಬುದೇ ವಿಶೇಷ.
ಪಾಕಿಸ್ತಾನ್ ತಂಡದ ಸೋಲು ಖಚಿತವಾಗುತ್ತಿದ್ದಂತೆ ಪಾಕ್ನಲ್ಲಿನ ಅಭಿಮಾನಿಗಳು ವಿರಾಟ್ ಕೊಹ್ಲಿಯ ಶತಕಕ್ಕಾಗಿ ಕಾತುರದಿಂದ ಕಾಯುತ್ತಿದ್ದರು. ಅಂತಿಮವಾಗಿ ಕೊಹ್ಲಿ ಫೆÇೀರ್ ಬಾರಿಸುತ್ತಿದ್ದಂತೆ ಇಸ್ಲಾಮಾಬಾದ್ನಲ್ಲಿನ ಕೊಹ್ಲಿ ಫ್ಯಾನ್ಸ್ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.