ಬೆಂಗಳೂರು: 2024ನೇ ಸಾಲಿನ ಜೂನ್ ಮಾಹೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಪೂರೈಸಿ ಒಟ್ಟು 1185 ಪ್ರಕರಣಗಳಲ್ಲಿ 810 ಜನರಿಗೆ ಶಿಕ್ಷೆಯಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.ಕೊತ್ನೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಆರೋಪಿಗೆ ಜೀವಾವಧಿ ಶಿಕ್ಷೆ ನ್ಯಾಯಾಲಯ ಘೋಷಿಸಿದೆ.
ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಮೂರು ಜನ ಆರೋಪಿಗಳಿಗೆ 20 ವರ್ಷ ಸಾದಾ ಶಿಕ್ಷೆ ವಿಧಿಸಲಾಗಿದೆ, ಈ ಪ್ರಕರಣವು 2019ರಲ್ಲಿ ಜರುಗಿತ್ತು.ಹೆಚ್ಎಎಲ್ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ 20 ವರ್ಷ ಸಾದಾ ಶಿಕ್ಷೆ ಮತ್ತು ಐವತ್ತು ವರ್ಷ 50 ಸಾವಿರ ದಂಡ ನ್ಯಾಯಾಲಯ ವಿಧಿಸಲಾಗಿದೆ.
ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದ ಆರೋಪಿಗೆ 10 ವರ್ಷ ಘನ ನ್ಯಾಯಾಲಯ ಶಿಕ್ಷೆ ವಿಧಿಸಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2007ರಲ್ಲಿ ವಂಚನೆ ಪ್ರಕಾರದಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಆರೋಪಿಗಳಿಗೆ ತಲಾ ನಾಲ್ಕು ವರ್ಷ ಶಿಕ್ಷೆ ಹಾಗೂ ಐದು ಸಾವಿರ ದಂಡ ನ್ಯಾಯಾಲಯ ವಿಧಿಸಲಾಗಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ 2020ರ ಏನ್ಡಿಪಿಎಸ್ ಪ್ರಕರಣದಲ್ಲಿ ಆರೋಪಿಗೆ ಮೂರು ವರ್ಷ ಆರು ತಿಂಗಳು ಸದಾ ಸಾದಾ ಶಿಕ್ಷೆ ಮತ್ತು 7,000 ದಂಡ ನ್ಯಾಯಾಲಯ ವಿಧಿಸಲಾಗಿದೆ.ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ 10 ತಿಂಗಳು ಶಿಕ್ಷೆ ಆಗುವ ರೂ.10,000 ದಂಡ ನ್ಯಾಯಾಲಯ ವಿಧಿಸಲಾಗಿದೆ.
ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿ ಒಬ್ಬನಿಗೆ ಒಂದು ವರ್ಷ ಸಾದಾ ಶಿಕ್ಷೆ ನ್ಯಾಯಾಲಯ ವಿಧಿಸಲಾಗಿದೆ.