ಬೆಂಗಳೂರು: ಬನಶಂಕರಿ ಪೊಲೀಸರು ಹ್ಯಾಂಡಲ್ ವಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುತ್ತಾರೆ.
22 ವರ್ಷದ ರಘುನಂದನ ಎಂಬಾತನನ್ನು ಬಂಧಿಸಿ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ ಇವುಗಳ ಮೌಲ್ಯ ಒಂದು ಕಾಲು ಲಕ್ಷ ರೂಪಾಯಿಗಳಾಗಿರುತ್ತದೆ.
ಎಚ್ಎಎಲ್ ಪೊಲೀಸರು ಬಸ್ಗಳಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 4 ಲಕ್ಷ ರೂ ಬೆಲೆ ಬಾಳುವ ವಿವಿಧ ಬಗೆಯ ಮೊಬೈಲ್ ಫೋನ್ಗಳನ್ನು ವಶಪಡಿಸಿ ಕೊಂಡಿರುತ್ತಾರೆ. 34 ವರ್ಷದ ಅಲೀಮ್ ಎಂಬ ಆರೋಪಿಯನ್ನು ಬಂಧಿಸಿ 11 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿರುತ್ತಾರೆ.
ಈ ಆರೋಪಿಯು ಕುಂದಲಳ್ಳಿ ಮತ್ತು ಮಾರತಳ್ಳಿ ಬಳಿ ಜನನಿ ಬಿಡ ಬಸ್ಗಳಲ್ಲಿ ಪ್ರಯಾಣ ಬೆಳೆಸಿ ಸಾರ್ವಜನಿಕರ ಪರ್ಸುಗಳಲ್ಲಿ ಮತ್ತು ಜೋಬುಗಳಿಂದ ಮೊಬೈಲ್ ಕಳವು ಮಾಡುತ್ತಿದ್ದನು.ಪತ್ತೆಯಾಗಿರುವ 11 ಮೊಬೈಲ್ಗಳಲ್ಲಿ ಮೂರು ವಾರಸುದಾರರು ಪತ್ತೆಯಾಗಿದ್ದು ಇನ್ನೂ ಎಂಟು ಕಳೆದುಕೊಂಡಿರುವ ಜನರು ಪತ್ತೆಯಾಗಿರಬೇಕಾಗಿರುತ್ತದೆ.
ಒಂಟಿ ಪ್ರಯಾಣಿಕರನ್ನೇ ಗುರಿಯಾಗಿಸಿ ಕೊಂಡು, ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್, ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಬ್ಯಾಟ ರಾಯನಪುರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಆರೋಪಿಯಾಗಿದ್ದಾಳೆ,ಬಿಎಂಟಿಸಿ ಬಸ್ನಲ್ಲಿ ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಕಳ್ಳಿ, ಪರಿಚಯ ಮಾಡಿಕೊಂಡು ಜ್ಯೂಸ್ ಕುಡಿಯಲು ಕರೆದುಕೊಂಡು ಹೋಗ್ತಿದ್ದಳು. ಜ್ಯೂಸ್ ಕುಡಿದು ಪ್ರಜ್ಞೆ ಕಳೆದುಕೊಂಡ ತಕ್ಷಣ ಮೊಬೈಲ್, ಪರ್ಸ್, ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದಳು.
ಈ ಬಗ್ಗೆ ಮಾಹಿತಿ ಪಡೆದ ಬ್ಯಾಟರಾಯನಪುರ ಪೊಲೀಸರು ಆಕೆಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಠಾಣೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ಹಿಳೆ ವಿಷಪೂರಿತ ಚಾಕೊಲೆಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಮಹಿಳೆ ಕುಸಿದುಬಿದ್ದ ನಂತರ ಪೊಲೀಸರು ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.