ನಂಜನಗೂಡು: ಗ್ರಾಮಾಂತರ ಪ್ರದೇಶಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು.ತಾಲೂಕಿನ ಮಸಗೆ ಗ್ರಾಮದಲ್ಲಿ ಕುಂಬಾರ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ, ಎಚ್ಚಗುಂಡ್ಲ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ 20 ಲಕ್ಷ, ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ 5 ಲಕ್ಷ, ಕೆರೆಹುಂಡಿ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ 25 ಲಕ್ಷ, ಮುದ್ದಹಳ್ಳಿ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ 25 ಲಕ್ಷ,
ನವಿಲೂರು ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ 25 ಲಕ್ಷ, ಹೊಸಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಗ್ರಾಮ ದಾರಿ 20 ಲಕ್ಷ, ಸೂರಳ್ಳಿ ಗ್ರಾಮದಲ್ಲಿ 20 ಲಕ್ಷ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು ನಮ್ಮ ಕ್ಷೇತ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಕೋಟಿ ಅನುದಾನ ನೀಡಿ ಸಹಕರಿಸಿದ್ದಾರೆ ಹಾಗೂ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಗ್ರಾ. ಪಂ ಅಧ್ಯಕ್ಷ ಮಹದೇವು, ಕಳಲೆ ಮಹೇಶ್, ವಿಜಯ್ ಕುಮಾರ್, ಮಹೇಶ್, ಮಾದಪ್ಪ, ತಗಡೂರ್ ನಾಯಕ, ಲಕ್ಷ್ಮಣ್, ರೇವಣ್ಣ, ಜವರಯ್ಯ , ನಾಗಪ್ಪ, ಸಣ್ಣಮ್ಮ , ಕೆಂಪರಾಜು, ಮಾಲಿಂಗಪ್ಪ , ಪುಟ್ಟಪ್ಪ ಮತ್ತು ಮುಖಂಡರುಗಳು, ಊರಿನ ಯಜಮಾನರು,ಗ್ರಾಮಸ್ಥರು ಉಪಸ್ಥಿತರಿದ್ದರು.