ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭೆ ತೀವ್ರವಾಗಿ ಖಂಡಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಮಹಾಸಭೆಯ ಅಧ್ಯಕ್ಷ ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸಿ.ಟಿ.ರವಿಯವರು ಲಕ್ಷ್ಮೀಹೆಬ್ಬಾಳ್ಕರ ಅವರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವುದು ಮಾಧ್ಯಮಗಳ ವರದಿ ನೋಡಿ ತುಂಬ ಬೇಸರವಾಯಿತು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ನಾಲಿಗೆ ನಾಗರಿಕತೆ ಹೇಳುತ್ತದೆ.
ಜನಪ್ರತಿನಿಧಿಗಳು ಸದನದ ಗೌರವ ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳಿಗೆ ಇತರರಿಗೆ ಮಾದರಿಯಾಬೇಕು. ಅಸಂವಿಧಾನಿಕ ಪದ ಬಳಕೆ ಸದನದ ಇತಿಹಾಸಕ್ಕೆ ಕಪ್ಪು ಚುಕ್ಕೆ ಅವಾಚ್ಯ ಪದ ಬಳಕೆ ಮಾಡಿರುವುದಕ್ಕೆ ಅಖಿಲಭಾರತ ವೀರಶೈವ ಮಹಾಸಭೆ ತೀವ್ರವಾಗಿ ಖಂಡಿಸುತ್ತದೆ. ಅವಾಚ್ಯ ಪದ ಬಳಕೆ ಮಾಡಿರುವ ಸಿ.ಟಿ.ರವಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾಸಭೆ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದಿದ್ದಾರೆ.