ನವದೆಹಲಿ: ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಕೆಲವು ಸೂಚನೆಗಳನ್ನು ನೀಡಿದೆ. ಕೆಲಸದ ಸ್ಥಳದಲ್ಲಿ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಹೇಳಿದೆ.
ಈ ಕಾರ್ಯಪಡೆಯು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ರಾಷ್ಟ್ರದಾದ್ಯಂತ ನೈತಿಕ ಮಾನದಂಡಗಳನ್ನು ಜಾರಿಗೊಳಿಸುವ ಗುರಿಯನ್ನು ಹೊಂದಿರುತ್ತವೆ.ಸಂತ್ರಸ್ತೆಯ ಗುರುತು ಬಹಿರಂಗವಾಗುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಭದ್ರತೆಗೆ …ಸಮಸ್ಯೆಯಾಗಬಹುದು ಎಂದು ಕಳವಳ ವ್ಯಕ್ತಪಡಿಸಿದೆ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರ ಪಾತ್ರದ ಬಗ್ಗೆಯೂ ಪ್ರಶ್ನೆಗಳು ಎದ್ದವು.
ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸುವುದಾಗಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ ಮುಷ್ಕರ ಅಂತ್ಯಗೊಳಿಸಿ ಕೆಲಸಕ್ಕೆ ಮರಳುವಂತೆ ವೈದ್ಯರಿಗೆ ಮನವಿ ಮಾಡಲಾಗಿದೆ.ಇದೇ ವೇಳೆ ಆರೋಪಿ ಸಂಜಯ್ ರಾಯ್ ಅವರ ಪಾಲಿಗ್ರಫಿ ಪರೀಕ್ಷೆಗೆ ಸಿಬಿಐ ಅನುಮತಿ ಪಡೆದಿದೆ. ಈ ಪರೀಕ್ಷೆ ಇಂದು ನಡೆಯಲಿದೆ. ಸಂಜಯ್ ರಾಯ್ ಅವರ ನಿರಂತರ ವಿಚಾರಣೆ ನಡೆಯುತ್ತಿದೆ.
ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ನವದೆಹಲಿ ತಲುಪಿದ್ದಾರೆ. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಲಿದ್ದಾರೆ. ಈ ವೇಳೆ ಅವರು ಬಂಗಾಳದ ಪರಿಸ್ಥಿತಿ ಕುರಿತು ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ.