ಬೆಂಗಳೂರು: ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆ ವಿದ್ಯಾರ್ಥಿ ಮೇಲಿನ ಅತ್ಯಾಚಾರ, ಹತ್ಯೆ ಕೇಸ್ಗೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ವಿರುದ್ಧ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ನೀಡಿದ್ದು ಇಂದಿನಿಂದ ದೇಶಾದ್ಯಂತ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ.
ಇನ್ನು ಕರ್ನಾಟಕದಲ್ಲೂ ಜೂನಿಯರ್ ವೈದ್ಯರು ಸೇವೆ ನಿಲ್ಲಿಸಿ ಪ್ರತಿಭಟನೆಗೆ ಇಳಿದಿದ್ದು ಇತ್ತ ಸೀನಿಯರ್ ವೈದ್ಯರು ಕಪ್ಪು ಪಟ್ಟಿ ಕಟ್ಟಿಕೊಂಡು ರೋಗಿಗಳ ಚಿಕಿತ್ಸೆ ಮುಂದುವರೆಸಿದ್ದಾರೆ.ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜೂನಿಯರ್ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಇದರಿಂದ ಆಸ್ಪತ್ರೆಗಳಲ್ಲಿ ತುರ್ತು ಸೇವೆಯಲ್ಲಿ ಕೊಂಚ ವ್ಯತ್ಯಯವಾಗಿದೆ.
ಸದ್ಯ ಸೀನಿಯರ್ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು ಆಸ್ಪತ್ರೆಗೆ ಹಾಜರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಪ್ರತಿ ದಿನ ಆಸ್ಪತ್ರೆಗೆ ಸಾವಿರಾರು ರೋಗಿಗಳು ಚಿಕಿತ್ಸೆಗೆ ಬರುತ್ತಾರೆ.ಎಲ್ಲಾ ವೈದ್ಯರು ಪ್ರತಿಭಟನೆಗೆ ಇಳಿಯುವುದರಿಂದ ರೋಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾದ ಡಾ. ಶ್ರೀನಿವಾಸ್ ಅವರು ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಘಟನೆ ತುಂಬಾ ದುಃಖ ತಂದಿದೆ.
ಘಟನೆಗೆ ನಮ್ಮ ಖಂಡನೆ ಇದೆ. ಈಗಾಗಲೇ ಜೂನಿಯರ್ ಡಾಕ್ಟರ್ಸ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸೀನಿಯರ್ ಡಾಕ್ಟರ್ ಕೂಡ ಪ್ರತಿಭಟನೆಗೆ ಇಳಿದರೆ ರೋಗಿಗಳ ಚಿಕಿತ್ಸೆಗೆ ಸಮಸ್ಯೆ ಆಗುತ್ತೆ, ಹೀಗಾಗಿ ನಾವು ಸಭೆ ನಡೆಸಿ ಎರಡು-ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ. ರಾಜ್ಯದಲ್ಲಿ ಡೆಂಗ್ಯೂ ಸೇರಿದಂತೆ ನಾನಾ ರೋಗ ಸಮಸ್ಯೆಗಳು ತಾಂಡವವಾಡುತ್ತಿದೆ. ಇದೆಲ್ಲವನ್ನೂ ನೋಡಿಕೊಂಡು ತೀರ್ಮಾನ ಮಾಡಲಾಗುತ್ತೆ ಎಂದರು.