ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯವು ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶದ ಮೇಲೆ ಟೀಮ್ ಇಂಡಿಯಾ ತನ್ನ ಪ್ರಾಬಲ್ಯ ಸಾಧಿಸಿದೆ.
ಎರಡನೇ ದಿನ ಮೊದಲ ಇನ್ನಿಂಗ್ಸ್ನಲ್ಲಿ ಭಾರತ 376 ರನ್ಗಳಿಗೆ ಆಲೌಟಾಗಿದೆ.ಬಾಂಗ್ಲಾದೇಶ ಪರ ಹಸನ್ ಮಹಮೂದ್ ಮತ್ತು ತಸ್ಕಿನ್ ಅಹ್ಮದ್ ಉರಿ ಬೌಲಿಂಗ್ ದಾಳಿ ನಡೆಸಿದರು. ಪರಿಣಾಮ ಎರಡನೇ ದಿನದಾಟದ ಆರಂಭದಲ್ಲೇ ಟೀಮ್ ಇಂಡಿಯಾ ಸರ್ವಪತನವಾಯಿತು.
ಇನ್ನೊಂದೆಡೆ ಟೆಸ್ಟ್ ಕ್ರಿಕೆಟ್ನಲ್ಲಿ ಐದನೇ ಶತಕ ದಾಖಲಿಸುವ ಕನಸು ಕಾಣುತ್ತಿದ್ದ ರವೀಂದ್ರ ಜಡೇಜಾ ನಿರಾಸೆ ಅನುಭವಿಸಿದರು. 86 ರನ್ ಗಳಿಸಿ ಅದ್ಭುತವಾಗಿ ಆಡುತ್ತಿದ್ದ ಅವರು ತಸ್ಕಿನ್ ಅಹ್ಮದ್ ಬೌಲಿಂಗ್ನಲ್ಲಿ ಔಟಾದರು. ಇದರೊಂದಿಗೆ ಭಾರತ 400 ರನ್ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ.