ಮಂಡ್ಯ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರವ ಆದರ್ಶ ಮೈಗೂಡಿಸಿಕೊಳ್ಳಬೇಕು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ.ನಿಮ್ಮ ಗುರಿ ಸಾಧನೆ ತನಕ ಮೊಬೈಲ್,ದೂರದರ್ಶನ ನೋಡಬಾರದು.ಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕ ಸವಿತಾ ಪಾಟೀಲ್ ತಿಳಿಸಿದರು.
ನಗರದ ಶಂಕರನಗರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಂಡ್ಯ ಅಮೃತ ಅಲಯನ್ಸ್ ಸಂಸ್ಥೆ ಮತ್ತು ನಿವೃತ್ತ ಶಿಕ್ಷಕ ಕೆ ಮಾಯಿಗ ಶೆಟ್ಟಿ ಸೇವಾ ಸಮಿತಿ ಆಯೋಜಿಸಿದ ಸ್ವಾಮಿ ವಿವೇಕಾನಂದರ ಜಯಂತಿ ಜನ್ಮದಿನಾಚರಣೆ ಹಾಗೂ ತ್ರಿ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಜನ್ಮದಿನಾಚರಣೆ ಅಂಗವಾಗಿ ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳು ಹಾಗೂ ಸಿಹಿ ವಿತರಿಸಿ ಮಾತನಾಡಿದರು.
ಬಳಿಕ ಮಂಡ್ಯ ಅಮೃತ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಎಂ ಲೋಕೇಶ್ ಸ್ವಾಮಿ ವಿವೇಕಾನಂದರ ಮತ್ತು ತ್ರಿದಾಸೋಹಿ ಡಾ. ಶಿವಕುಮಾರ ಸ್ವಾಮಿಯವರ ಜನ್ಮೋತ್ಸವದ ಶುಭಾಶಯಗಳನ್ನು ತಿಳಿಸಿ, ಶಾಲೆಗೆ, ಹೆತ್ತವರಿಗೆ, ಶಿಕ್ಷಕರಿಗೆ ಹಾಗೂ ನಾಡಿಗೆ ಕೀರ್ತಿಯನ್ನು ತರಬೇಕು ಎಂದರು. ನಂತರ ಹಿರಿಯ ಪತ್ರಕರ್ತ ಬಸವೇಗೌಡ ಮಾತನಾಡಿ ಸಂಘ ಸಂಸ್ಥೆಗಳು ಮಾಡುತ್ತಿರುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಎಂದರು.
ಲಯನ್ಸ್ ಸಂಸ್ಥೆ ಜಿಲ್ಲಾ ಸಂಪುಟ ಕಾರ್ಯದರ್ಶಿ ಕೆ.ಎಸ್. ಚಂದ್ರಶೇಖರ್ ಮಾತನಾಡಿ ಸ್ವಾಮಿ ವಿವೇಕಾನಂದರವರ ಆದರ್ಶವನ್ನು ತಾವೆಲ್ಲರೂ ಪಾಲನೆ ಮಾಡಿ ಅವರಂತೆ ಮುಂದಿನ ದಿನಗಳಲ್ಲಿ ದೊಡ್ಡ ವ್ಯಕ್ತಿಗಳಾಗಬೇಕು ಎಂದರು. ಸಹ ಶಿಕ್ಷಕಿ ಅಂಬಿಕಾ.ಮಾತನಾಡಿ ನಮ್ಮ ಶಾಲೆಯಲ್ಲಿ ಬಡ ಕುಟುಂಬದಿಂದ ಬಂದಿರುವಂತಹ ವಿದ್ಯಾರ್ಥಿಗಳಿದ್ದು ಮುಂದಿನ ದಿನಗಳಲ್ಲಿ ಸಹ ಮಕ್ಕಳಿಗೆ ಸಹಕಾರ ನೀಡಬೇಕು ಎಂದರು. ಇದೇ ಸಂದರ್ಭದಲ್ಲಿ ಎಲ್ಲಾ ಮಕ್ಕಳಿಗೂ ಲೇಖನ ಸಾಮಗ್ರಿಗಳು ಮತ್ತು ಸಿಹಿಯನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಎಂ ಲೋಕೇಶ್. ಸವಿತಾ ಪಾಟೀಲ್, ಕೆ.ಎಸ್.ಚಂದ್ರಶೇಖರ್, ಬಸವೇಗೌಡ, ಮೋಹನ್, ಧನ್ಯ, ದೀಪು, ಗೋವಿಂದಯ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.