ಬೆಳಗಾವಿ: ನಗರದ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ವಿಧಾನ ಸಭೆಗೆ ಆಯ್ಕೆಯಾಗಿರುವ ಮೂವರು ಶಾಸಕರು ಇಂದು ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪತಿ ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಸಂಡೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿರುವ ಅನ್ನಪೂರ್ಣ ತುಕಾರಾಂ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಮೊದಲು ಅವರು ವಿಧಾನಸಭಾ ಪ್ರಾಂಗಣದಲ್ಲಿ ತಮ್ಮ ಪತಿಯೊಂದಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪಾದಗಳಿಗೆ ನಮಸ್ಕರಿಸಿದರು