ಬೆಂಗಳೂರು ಕನ್ನಿಂಗ್ಹ್ಯಾಮ್ ರಸ್ತೆ ವಸಂತನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರಿಂದ ಅಂತರರಾಷ್ಟ್ರೀಯ ಚಿತ್ರೋತ್ಸವದ ಪ್ರಶಸ್ತಿ ಪಡೆದಿರುವ ಬರಗೂರು ರಾಮಚಂದ್ರಪ್ಪ ನಿರ್ದೇಶನದಲ್ಲಿ “ಚಿಣ್ಣರಚಂದ್ರ” ಚಿತ್ರ ಬಿಡುಗಡೆ ಕಾರ್ಯಕ್ರಮ ಫೆ.10ರಂದು ಸೋಮವಾರ ಮಧ್ಯಾಹ್ನ 2.45ಕ್ಕೆ ಏರ್ಪಡಿಸಿದೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಪದವಿಪೂರ್ವ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷರಾದ ತಿಮ್ಮಯ್ಯಪುರ್ಲೆ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್,ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ, ಉಪನಿರ್ದೇಶಕರಾದ ಕೆ.ಜಿ.ಆಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಬಿ.ರಘುಚಂದ್ರ, ಹೆಚ್.ತಾರಾನಾಥ್, ಬದಲಾವಣೆಯತ್ತ ಬಳಗದ ಟಿ.ಬಿ.ಅಶೋಕ್ ಸೇರಿದಂತೆ ಅನೇಕ ಗಣ್ಯರು ಆಗಮಿಸುತ್ತಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಆಗಮಿಸಬೇಕೆಂದು ಚಿಣ್ಣರಚಂದ್ರ ಚಲನಚಿತ್ರ ನಿರ್ಮಾಪಕರು,ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪುರಸ್ಕøರು,ಆಪ್ತ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಜಿಗಣಿ ರಾಜಶೇಖರ್, (ಬಿ.ಎನ್.ಗೋವಿಂದರಾಜ್ರವರು) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.