ರಾಮನಗರ: ಪ್ರತಿಷ್ಠಿತ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿದೆ.ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದ್ದು ಶೌಚ ಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ ಎನ್ನಲಾಗಿದೆ.
ಆಸ್ಪತ್ರೆಯ ಶೌಚಾಲಯ ಕಟ್ಟಿಕೊಂಡ ಹಿನ್ನಲೆ ಪರಿಶೀಲನೆ ನಡೆಸಿದ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದ್ದು ಆಗ ತಾನೆ ಜನಿಸಿರೋ ಮಗು ಜನನ ಮರೆಮಾಚಲು ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಆಸ್ಪತ್ರೆ ವೈದ್ಯರಿಂದ ಹಾರೋಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರುಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಮುಂದಾಗಿದ್ದಾರೆ. ಮಗುವಿನ ಡಿಎನ್ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.