ಶ್ರೀಲಂಕಾ ತಂಡದ ನೂತನ ಕೋಚ್ ಆಗಿ ಮಾಜಿ ಆಟಗಾರ ಸನತ್ ಜಯಸೂರ್ಯ ಸೆಲೆಕ್ಟ್ ಆಗಿದ್ದಾರೆ.ಈ ಹಿಂದೆ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ಕ್ರಿಸ್ ಸಿಲ್ವರ್ವುಡ್ ಟಿ20 ವಿಶ್ವಕಪ್ನಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಶ್ರೀಲಂಕಾ ತಂಡದ ಮಾಜಿ ಆಲ್ರೌಂಡರ್ ಸನತ್ ಜಯಸೂರ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಸನತ್ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಮುಖ್ಯ ಆಯ್ಕೆಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಲಂಕಾ ತಂಡದ ತರಬೇತುದಾರನಾಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.