ದೇವನಹಳ್ಳಿ/ದೊಡ್ಡಬಳ್ಳಾಪುರ: ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ರಥೋತ್ಸವ ಹಿನ್ನೆಲೆ, ಸುಭ್ರಮಣ್ಯ ಸ್ವಾಮಿ ದೇವರ ದರ್ಶನಕ್ಕೆ ಭಕ್ತರ ಪರದಾಟ ನಡೆಸಿದರು,ಬೆಳಗ್ಗೆ 6 ಗಂಟೆಯಿಂದ ಕ್ಯೂ ನಲ್ಲಿ ನಿಂತಿರುವ ಭಕ್ತರು ನಿರಂತರ 5 ಗಂಟೆಗಳ ಕಾಲ ಕ್ಯೂ ನಲ್ಲಿ ನಿಂತ್ರೂ ಸರಿಯಾಗಿ ದರ್ಶನ ಆಗದಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಮತ್ತು ದೇವಸ್ಥಾನದಲ್ಲಿನ ಅವ್ಯವಸ್ಥೆ ವಿರುದ್ಧ ಭಕ್ತಾಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇವಲ ಹಣ ಸಂಗ್ರಹ ಮಾಡುತ್ತಾರೆ ಆದರೆ ಯಾವುದೇ ವ್ಯವಸ್ಥೆ ಮಾಡಿಲ್ಲ,ದುಡ್ಡು ಕೊಟ್ಟರೂ ದರ್ಶನ ಇಲ್ಲ ಗಂಟೆಗಟ್ಟಲೆ ಕ್ಯೂ ನಲ್ಲಿ ನಿಂತವರಿಗೆ ಕುಡಿಯಲು ನೀರು ಇಲ್ಲದ ಪರದಾಡಿದ್ದಾರೆ.
ಘಾಟಿ ಸುಬ್ರಮಣ್ಯ ಕ್ಷೇತ್ರ ರಥ ಸೇರಿದಂತೆ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದ ಗರುಡ,ಪ್ರತಿಭಾರಿ ರಥೋತ್ಸವದ ವೇಳೆ ಪ್ರತ್ಯಕ್ಷವಾಗುವ ಗರುಡ,ಈ ಭಾರಿಯು ರಥ ಸೇರಿದಂತೆ ದೇವಾಲಯದ ಸುತ್ತಾ ಪ್ರದಕ್ಷಿಣೆ ಹಾಕಿ ಶುಭ ಸೂಚನೆ.
ಗರುಡ ಪ್ರದಕ್ಷಿಣೆ ನಂತರ ರಥೋತ್ಸವಕ್ಕೆ ಶುಭ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಸಚಿವರಿಂದ ಚಾಲನೆ ನೀಡಿದರು,ಸಾವಿರಾರು ಸಂಖ್ಯೆಯಲ್ಲಿ ರಥೋತ್ಸವಕ್ಕೆ ಆಗಮಿಸಿರುವ ಭಕ್ತರು ರಥಕ್ಕೆ ಬಾಳೆಹಣ್ಣು ಸಮರ್ಪಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿದರು.ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಮುಜರಾಯಿ ಇಲಾಖೆ ತಹಸೀಲ್ದಾರ್, ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.