ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರು ಇಂದು (ಡಿ. 09) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಭೇಟಿಕೊಟ್ಟು ಅಧಿಕಾರ ಸ್ವೀಕರಿಸಿದರು.ತಾಲ್ಲೂಕಿನ ಸುಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರಕ್ಕೆ 05 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ ಎನ್.ರಂಗಪ್ಪ ರವಿ.ಕೆ.ಎಸ್ ಲಕ್ಷ್ಮ್ಯ ನಾಯಕ ಆರ್.ವಿ.ಮಹೇಶ್ ಕುಮಾರ್, ಎಂ.ಹೇಮಲತ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶರಾಗಿ ಆಯ್ಕೆ ಮಾಡಿ ಆದೇಶಿಸಿಸಲಾಗಿದೆ.
ಶ್ರೀ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನವಾಗಿ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಆರ್. ವಿ. ಮಹೇಶ್ ಕುಮಾರ್ ಅವರು ಮಾತನಾಡಿ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಎಲ್ಲರ ಸಹಕಾರದೊಂದಿಗೆ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು, ನಮ್ಮನ್ನ ನಂಬಿ ನೀಡಿರುವ ಈ ಅವಕಾಶವನ್ನು ಹಿರಿಯರ ಮಾರ್ಗದರ್ಶನದೊಂದಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತರಾದ 5 ಸದಸ್ಯರು ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದರು.
ನೂತನ ಸದಸ್ಯರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡರು ಸೇರಿದಂತೆ ದೇವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವರ್ಗ ಅಭಿನಂದನೆಸಲ್ಲಿಸಿದರು.ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರಾಜಘಟ್ಟ ನಾರಾಯಣಸ್ವಾಮಿ, ಗಂಗಸಂದ್ರ ಶೀಧರ್, ಕಾಂತರಾಜು, ಗೋಪಾಲನಾಯಕ್, ಆರ್.ವಿ.ಮನುಕುಮಾರ್, ಆರ್.ವಿ ಶಿವಕುಮಾರ್ ಉಪಸ್ಥಿತರಿದ್ದರು.