ಬೆಂಗಳೂರು: ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸದೆ, ಮೋಟರ್ ಸೈಕಲ್ ಗಳನ್ನು ಚಲಾಯಿಸುವಾಗ ಹೆಲ್ಮೆಟ್ ಧರಿಸದೆ, ಒಂದು ದ್ವಿಚಕ್ರ ವಾಹನದಲ್ಲಿ ಮೂರು ಜನ ಪ್ರಯಾಣಿಸುವುದು, ಹಾಗೂ ಇತರೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿನ್ನೆ ಪೂರ್ವ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ೫೨೯ ಪ್ರಕಾರಗಳನ್ನು ದಾಖಲಿಸಿಕೊಂಡಿರುತ್ತಾರೆ.
೫೨೯ ಪ್ರಕರಣಗಳ ಚಾಲಕರುಗಳಿಂದ ೨,೬೪,೦೦೦ ರೂಪಾಯಿ ದಂಡ ಕಟ್ಟಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪೂರ್ವ ವಿಭಾಗದ ಡಿಸಿಪಿ ತಿಳಿಸಿರುತ್ತಾರೆ.