ಬೆಂಗಳೂರು: ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಂಧ್ಯಾ ಥಿಯೇಟರ್ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅಲ್ಲು ಅರ್ಜುನ್ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಅವರು ಕೋರಿದ್ದಾರೆ.
ಈ ಬಗ್ಗೆ ಕೋರ್ಟ್ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.ಡಿಸೆಂಬರ್ 4ರಂದು ದುರ್ಘಟನೆ ನಡೆಯಿತು. `ಪುಷ್ಪ 2′ ಚಿತ್ರದ ಪ್ರೀಮಿಯರ್ ಶೋ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆಯಿತು.
ಈ ವೇಳೆ ಅಲ್ಲು ಅರ್ಜುನ್ ಕೂಡ ಬಂದಿದ್ದರು. ಥಿಯೇಟರ್ನಲ್ಲಿ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು.