ನವದೆಹಲಿ: ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಆಡಿರುವ ಮಾತುಗಳ ಸಂಬಂಧ ದೆಹಲಿಯ ಸಂಸತ್ ಭವನದ ಬಳಿ ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ್ದಾರೆ.
ಶಾ ಹೇಳಿಕೆ ಖಂಡಿಸಿ ಇಂಡಿಯಾ ಒಕ್ಕೂಟದ ಸದಸ್ಯರು ರಾಹುಲ್ ಗಾಂಧಿ ನೇತೃತ್ವದಲ್ಲಿ ನೀಲಿ ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ನೀಲಿ ಟೀಷರ್ಟ್ ತೊಟ್ಟು ಪ್ರತಿಭನೆಯಲ್ಲಿ ಪಾಲ್ಗೊಂಡಿದ್ದರು.ಕಾಂಗ್ರೆಸ್ನವರ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಸದಸ್ಯರು ಸಹ ಕಾಂಗ್ರೆಸ್ನವರು ಶಾ ಅವರ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಆರೋಪಿಸಿ ಅವರು ಸಹ ಸಂಸತ್ ಭವನದ ಬಳಿ ಪ್ರತಿಯಾಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಸಂಸದ ಪ್ರತಾಪ ಚಂದ್ರ ಸಾರಂಗಿಯವರು ಕುಸಿದು ಬಿದ್ದು ಗಾಯಗೊಂಡರು. ಗಾಯಗೊಂಡ ಸಾರಂಗಿ ತಮ್ಮನ್ನು ರಾಹುಲ್ ಗಾಂಧಿಯೇ ತಳ್ಳಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಅವರು ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.