ಬೆಂಗಳೂರು : ಬೀದರ್ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಕರೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸಚಿನ್ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಯಾಗಬೇಕು, ಇದು ಸಚಿನ್ ಕುಟುಂಬದ ಒತ್ತಾಯ ಕೂಡ, ಪ್ರಿಯಾಂಕ್ ಖರ್ಗೆ ಎಷ್ಟು ಮೇಧಾವಿಯೋ ಅಷ್ಟೇ ಮರೆವು ಜಾಸ್ತಿ. ಹಿಂದೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ನೀಡಿದ್ದರು.
ಕ್ಲೀನ್ ಚಿಟ್ ಸಿಕ್ಕಿದ ಮೇಲೆ ಜಾರ್ಜ್ ಮತ್ತೆ ಸಚಿವರಾದರು, ವಾಲ್ಮೀಕಿ ನಿಗಮದಲ್ಲಿ ನಾಗೇಂದ್ರ ರಾಜೀನಾಮೆ ನೀಡಿದರು, ಇದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು, ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆಯಿಂದ ರಾಜೀನಾಮೆ ಪಡೆಯಬೇಕು, ಸಚಿನ್ ಕುಟುಂಬಕ್ಕೆ ಸರ್ಕಾರ ಭದ್ರತೆ ನೀಡಬೇಕು, ಹಾಗೂ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.