ಬೆಳಗಾವಿ: ವಿಧಾನಸಭಾ ಅಧಿವೇಶನದ ಇವತ್ತಿನ ಕಾರ್ಯಕಲಾಪ ಶುರುವಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಬ್ಬಗೆಯ ನೀತಿ ತಳೆದಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು. ಹಿಂದೆ ಅವರು ಸಮಾಜದ ಮಗಳಾಗಿ ಹೋರಾಟದಲ್ಲಿ ಭಾಗವಹಿಸಿದ್ದೇನೆ ಅಂತ ಹೇಳಿದ್ದರು, ಆದರೆ ನಿನ್ನೆ ಸದನದಲ್ಲಿ ಮಾತಾಡುವಾಗ ಅವರು ಪ್ರತಿಭಟನೆಕಾರರ ಬಳಿ ಸರ್ಕಾರದ ಪ್ರತಿನಿಧಿಯಾಗಿ ಹೋಗಿದ್ದೆ ಅನ್ನುತ್ತಾರೆ ಎಂದು ಯತ್ನಾಳ್ ಹೇಳಿದರು.