ಆಗಸ್ಟ್ 5 ಸೋಮವಾರ, 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಪದಕ ಗೆಲ್ಲುವ ಸನಿಹ ಬಂದು ಮುಗ್ಗರಿಸುತ್ತಿದ್ದಾರೆ. ಇದುವರೆಗೆ ಪ್ಯಾರಿಸ್ನಲ್ಲಿ ಭಾರತ ಹಾಕಿ ತಂಡ ಕೂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಸೆಮಿಫೈನಲ್ ಪ್ರವೇಶಿಸಿದೆ.
ಭಾನುವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಭಾರತ ಶೂಟೌಟ್ನಲ್ಲಿ ಗೆದ್ದು ಬೀಗಿತ್ತು.ಇದೀಗ ಸೆಮಿಫೈನಲ್ ಪಂದ್ಯಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ.ಭಾರತ ಹಾಕಿ ತಂಡದ ಡಿಫೆಂಡರ್ ಅಮಿತ್ ರೋಹಿದಾಸ್ ಒಂದು ಪಂದ್ಯಕ್ಕೆ ನಿಷೇಧಕ್ಕೊಳಗಾಗಿದ್ದಾರೆ. ಮಂಗಳವಾರ ನಡೆಯಲಿರುವ ಜರ್ಮನಿ ವಿರುದ್ಧದ ಸೆಮಿಫೈನಲ್ ಪಂದ್ಯದಿಂದ ಹೊರಗುಳಿದ್ದಾರೆ.
ಭಾನುವಾರ ಗ್ರೇಟ್ ಬ್ರಿಟನ್ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ಪಡೆದ ನಂತರ ಒಂದು ಪಂದ್ಯಕ್ಕೆ ನಿಷೇಧಕ್ಕೊಳಗಾಗಿದ್ದಾರೆ.
ಒಲಿಂಪಿಕ್ಸ್ನ ಅಧಿಕಾರಿ ಮತ್ತು ಅಂತರರಾಷ್ಟ್ರೀಯ ಹಾಕಿ ಫೆಡರೇಶನ್ ಹೇಳಿಕೆಯ ಪ್ರಕಾರ, ‘ಆಗಸ್ಟ್ 4 ರಂದು ಭಾರತ ಮತ್ತು ಗ್ರೇಟ್ ಬ್ರಿಟನ್ ಪಂದ್ಯದ ವೇಳೆ ನೀತಿ ಸಂಹಿತೆ ಉಲ್ಲಂಘನೆಗಾಗಿ ಭಾರತ ಹಾಕಿ ತಂಡದ ಡಿಫೆಂಡರ್ ಅಮಿತ್ ರೋಹಿದಾಸ್ ಅವರನ್ನು ಒಂದು ಪಂದ್ಯಕ್ಕೆ ನಿಷೇಧಿಸಲಾಗಿದೆ.