ಬೆಂಗಳೂರು: ವಿಶ್ವ ಸಾರ್ವಜನಿಕ ಸಾರಿಗೆ ದಿನಾಚರಣೆಯ ಅಂಗವಾಗಿ ಬೆಂಗಳೂರು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಮೆಜೆಸ್ಟಿಕ್ ನ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕರನ್ನು ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಸಂಪರ್ಕಿಸಿ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ, ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗಳಾದ ಮೆಟ್ರೋ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಹಾಗೂ ರೈಲ್ವೆ ಮುಂತಾದ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಹೆಚ್ಚಾಗಿ ಬಳಸುವಂತೆ ಸಾರ್ವಜನಿಕರಿಗೆ ಸೂಕ್ತ ಸಲಹಾ ಸೂಚನೆಗಳನ್ನು ನೀಡಿದರು.
ಇಂದು ಬೆಳಿಗ್ಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ಸಂಚಾರ ವಿಭಾಗದ ಅನುಚ್ಛೇತ್ ರವರು ಸೇರಿದಂತೆ ಡಿಸಿಪಿ ಮತ್ತು ಎಸಿಪಿ, ಇನ್ಸೆ÷್ಪಕ್ಟರ್ ಮಟ್ಟದ ಅಧಿಕಾರಿಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.