ಚಿಂತಾಮಣಿ: ಸರ್ಕಾರಿ ನೌಕರರ ಸಮ್ಮಿಲನ ಸಮಾವೇಶ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘದಿಂದ ಗುರುವಾರ ಹಮ್ಮಿಕೊಂಡ ಪ್ರಯುಕ್ತ ಚಿಂತಾಮಣಿ ತಾಲೂಕಿನ ಸರ್ಕಾರಿ ನೌಕರರ ಸಂಘದ ಸದಸ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರು ಅರಮನೆ ಮೈದಾನಕ್ಕೆ ಪ್ರಯಾಣ ಬೆಳೆಸಿದರು.
ಸರ್ಕಾರಿ ನೌಕರರ ಚಿಂತಾಮಣಿ ತಾಲೂಕು ಘಟಕದ ಅಧ್ಯಕ್ಷ ಆರ್. ಅಶೋಕಕುಮಾರ ಪ್ರಯಾಣಕ್ಕೆ ಚಾಲನೆ ನೀಡಿ ಮಾತನಾಡಿ ಸರ್ಕಾರಿ ನೌಕರರಿಗೆ ಮಾರಕವಾದ ಎನ್ ಪಿ ಎಸ್ ಅನ್ನು ತೊಲಗಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಬೇಕು. ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು, ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಇನ್ನು ಹಲವಾರು ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ರಾಜ್ಯ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದಲ್ಲಿ ಮನವಿ ಮಾಡುತ್ತೇವೆ ಎಂದು ಹೇಳಿದರು.
ಸಮಾವೇಶದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಅವರು ಭಾಗವಹಿಸುತ್ತಾರೆ. ಪ್ರಜಾಸ್ನೇಹಿ ಆಡಳಿತ ನಡೆಸಲು ದಕ್ಷತೆ, ಪ್ರಾಮಾಣಿಕ ಸೇವೆಯಲ್ಲಿ ನೌಕರರ ಪಾತ್ರ ಹಾಗೂ ಭ್ರಷ್ಟಾಚಾರ ನಿಷೇದ ಕಾಯ್ದೆ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಉಪನ್ಯಾಸ ನೀಡುತ್ತಾರೆ. ವೃಂದ ಮತ್ತು ನೇಮಕಾತಿ ನಿಯಮಗಳ ಬಗ್ಗೆ ಸಮಸ್ಯೆ ಮತ್ತು ಪರಿಹಾರದ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್ ಕಾರ್ಯಾಗಾರ ಮಾಡುತ್ತಾರೆ. ಮಾಹಿತಿ ಹಕ್ಕಿನ ಬಗ್ಗೆ ಮಾಹಿತಿ ಹಕ್ಕು ಆಯೋಗದ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ್ ಮಾಹಿತಿ ನೀಡುತ್ತಾರೆಂದು ಹೇಳಿದರು.
ಅರಮನೆ ಮೈದಾನದಲ್ಲಿ ರಾಜ್ಯ ಪರಿಷತ್ತಿನ ಎಲ್ಲಾ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಈ ಸಮಾಗಮದಲ್ಲಿ ಪಾಲ್ಗೊಳ್ಳುತ್ತಾರೆ ಆದಕಾರಣ ಚಿಂತಾಮಣಿ ತಾಲೂಕಿನಿ ನೌಕರರ ಸಂಘದ ಕಾರ್ಯಕಾರಿಣಿ ಸದಸ್ಯರು ಸಮ್ಮಿಲನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿದ್ದೆ ಎಂದರು.ಚಿಂತಾಮಣಿ ಸರ್ಕಾರಿ ನೌಕರರ ಸಂಘದ ಖಜಾಂಚಿ ಜನಾರ್ದನ ಮೂರ್ತಿ, ಕಾರ್ಯದರ್ಶಿ ಆಂಜಿನಪ್ಪ, ರಾಜ್ಯ ಪರಿಷತ್ ಸದಸ್ಯ ಮಂಜುನಾಥ್, ಪದಾಧಿಕಾರಿಗಳಾದ ಮಧುಮತಿ, ರಾಧಮ್ಮ, ಹರಿಪ್ರಸಾದ್, ಶ್ರೀನಿವಾಸ್ ರೆಡ್ಡಿ, ಶಿಕ್ಷಕರ ಸಂಘದ ಮಸ್ತಾನ್ ವಲ್ಲಿ, ಜಗದೀಶ್, ರಮೇಶ ಉಪಸ್ಥಿತರಿದ್ದರು.