ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸರಣಿ ಅಪಘಾತ ಸಂಭವಿಸಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು.ಅತಿವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಆ ಕಾರು ಇನ್ನೊಂದು ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂರು ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸರಣಿ ಅಪಘಾತದಿಂದಾಗಿ ಫ್ಲೈಓವರ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ.
ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಎಲಿವೇಟೆಡ್ ಫ್ಲೈವರ್ ಸಿಬ್ಬಂದಿ ಆಗಮಿಸಿದ್ದು, ಅಪಘಾತವಾಗಿದ್ದ ವಾಹನಗಳನ್ನು ತೆರವು ಮಾಡಲು ಹರಸಾಹಸಪಟ್ಟಿದ್ದಾರೆ. ಇನ್ನೂ ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.