ಬೆಂಗಳೂರು ಗ್ರಾಮಾಂತರ: ವಿಜಯ್ ಫೌಂಡೇಷನ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಸಾಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟ್ರ್ಯಾಕ್ ಸೂಟ್, ಸ್ವೇಟರ್, ಟೀ ಶರ್ಟ್ ಗಳನ್ನು ವಿತರಿಸಲಾಯಿತು.ಬೆಂಗಳೂರಿನ ವಿಜಯ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ್ ಹಾಗೂ ಸಮಾಜ ಸೇವಕ ಹಾಗೂ ವಿಜಯ್ ಫೌಂಡೇಷನ್ ನ ಕಾರ್ಯದರ್ಶಿ ತಿರುಮಲೇಗೌಡ ಅವರು, ಸೌಹಾರ್ದ ಕರ್ನಾಟಕ ಸಂಘಟನೆಯ ರಾಜ್ಯ ಕಾರ್ಯದರ್ಶಿ, ಕನ್ನಡ ಜಾನಪದ ಪರಿಷತ್ತಿನ ಗೋವಿಂದರಾಜನಗರ ಘಟಕದ ಅಧ್ಯಕ್ಷ ರ. ನರಸಿಂಹಮೂರ್ತಿ ಮತ್ತು ವಿಜಯ್ ಫೌಂಡೇಷನ್ ನ ಪದಾಧಿಕಾರಿಗಳು ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಿರುಮಲೇ ಗೌಡರು ವಿಜಯ್ ಫೌಂಡೇಷನ್ ಮೂಲಕ ಕಳೆದ ವರ್ಷ ಆರಂಭದಲ್ಲಿ ಈ ಶಾಲೆ ಮತ್ತು ಅಕ್ಕಪಕ್ಕ ಗ್ರಾಮದ ಹಲವು ಶಾಲೆಗಳ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ಮತ್ತು ಬ್ಯಾಗ್ಗಳನ್ನು ನೀಡಿದ್ದೆವು ಈಗ ಶಾಲಾ ಮಕ್ಕಳಿಗೆ ಟ್ರ್ಯಾಕ್ ಶೂಟ್, ಟೀ ಶರ್ಟ್, ಸ್ವೇಟರ್ ಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.
ವಿಜಯ್ ಫೌಂಡೇಷನ್ ನ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ್ ಮಾತನಾಡಿ ಇದೇ ಊರಿನ ತಿರುಮಲೇಗೌಡರ ಆಶಯದಂತೆ ಕಸಾಘಟ್ಟ ಸರ್ಕಾರಿ ಶಾಲೆಯ ಮಕ್ಕಳಿಗೆ ಟ್ರ್ಯಾಕ್ ಸೂಟ್ ನೀಡಲಾಗುತ್ತಿದೆ,
ವಿಜಯ್ ಫೌಂಡೇಷನ್ ಮೂಲಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಸಹಾಯಸ್ತ ನೀಡುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಬೇಕಾಗುವ ಸಾಮಗ್ರಿಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಸೌಹಾರ್ದ ಕರ್ನಾಟಕ ರಾಜ್ಯ ಕಾರ್ಯದರ್ಶಿ,
ಕನ್ನಡ ಜಾನಪದ ಪರಿಷತ್ತಿನ ಗೋವಿಂದರಾಜನಗರ ಘಟಕದ ಅಧ್ಯಕ್ಷ ರ. ನರಸಿಂಹಮೂರ್ತಿ ಮಾತನಾಡಿ ಶಿಕ್ಷಣ ಕ್ಷೇತ್ರ ಖಾಸಗೀಕರಣಗೊಂಡಿದ್ದು ಗ್ರಾಮೀಣ ಪ್ರದೇಶದ ಮಕ್ಕಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉತ್ತೇಜನ ನೀಡುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳ ಮಕ್ಕಳ ಕಲಿಕೆಯನ್ನು ಉತ್ತೇಜಿಸುವ ಸಲುವಾಗಿ ಫೌಂಡೇಷನ್ ಅಧ್ಯಕ್ಷರಾದ ವಿಜಯಕುಮಾರ್ ಅವರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗೆ ವಿಜಯ್ ಫೌಂಡೇಷನ್ ಫೌಂಡೇಷನ್ ಸ್ಪಂಧಿಸುತ್ತಿದೆ ಎಂದು ತಿಳಿಸಿದರು.ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾ.ಪಂ.ಸದಸ್ಯರು, ಗ್ರಾಮಸ್ಥರು ವಿಜಯ್ ಫೌಂಡೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.