ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆಯಬೇಕಿದ್ದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಕಂದಾಯ ಭವನದಲ್ಲಿರುವ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಂಘಗಳನೋಂದಣಾಧಿಕಾರಿಗಳ ಕಚೇರಿ ಮುಂಭಾಗ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಡಿಆರ್ ಹಾಗೂ ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ನಿಖಿಲ್ ಕುಮಾಸ್ವಾಮಿ ಮಾತನಾಡಿ ಸೊಸೈಟಿ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಚುನಾವಣೆ ಮುಂದೂಡುತ್ತಿರುವುದು ಸರಿ ಅಲ್ಲ ಎಂದ ಅವರು ಕಾಂಗ್ರೆಸ್ ನ ದೌರ್ಜನ್ಯ ದಬ್ಬಾಳಿಕೆ ಅಧಿಕಾರ ಜಾಸ್ತಿ ದಿನ ಉಳಿಯುವುದಿಲ್ಲ ದೇವೇಗೌಡರ ಕಾಲದಿಂದ ರಾಜಕೀಯ ಮಾಡುತ್ತಾ ಬಂದಿರುವ ನಮ್ಮ ಪಕ್ಷ ಯಾವತ್ತೂ ಸಹ ಈ ರೀತಿ ಸಣ್ಣತನದ ರಾಜಕೀಯ ಮಾಡಿಲ್ಲ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು.
ಶೀಘ್ರದಲ್ಲಿ ಚುನಾವಣೆಯ ದಿನಾಂಕ ನಿಗಧಿ ಪಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ರೈತ ಮುಖಂಡರು, ಸಹಕಾರ ಸಂಘದ ನಿರ್ದೇಶಕರು, ಜೆಡಿಎಸ್ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಇದ್ದರು.