ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ಹಿನ್ನೆಲೆ ಮಂಡ್ಯದಲ್ಲಿ ತಾಯಿ, ಮಗ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್. ಮಂಡ್ಯ ಜಿಲ್ಲೆಯ ಕೊನ್ನಾಪುರಕ್ಕೆ ಭೇಟಿ ನೀಡಲಿದ್ದಾರೆ.
2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ 6 ಲಕ್ಷ ಸಾಲ ಪಡೆದಿದ್ದ ಪ್ರೇಮಾ, ಮೂರು ತಿಂಗಳು ಕಂತು ಕಟ್ಟದ ಹಿನ್ನೆಲೆ ಮನೆ ಸೀಜ್ ಮಾಡಲಾಗಿತ್ತು. ಇದರಿಂದ ಮನನೊಂದು ಪ್ರೇಮ ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದು, ತಾಯಿ ಸಾವಿನಿಂದ ನೊಂದ ಮಗ ರಂಜಿತ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಇಂದು ಮೃತರ ಕುಟುಂಬವನ್ನ ಭೇಟಿ ಮಾಡಿ ಸಾಂತ್ವಾನ ಹೇಳಲಿರುವ ಆರ್.ಅಶೋಕ್.ಮಧ್ಯಾಹ್ನ 12 ಗಂಟೆಗೆ ನಂತರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.