ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ದೆಹಲಿಯ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.
ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.
ಮೋದಿ ಅವರು ಟ್ವೀಟ್ ಮಾಡಿ ಮನಮೋಹನ್ ಸಿಂಗ್ ಆಡಳಿತರ ಬಗ್ಗೆ ಕೊಂಡಾಡಿ ಸಂತಾಪ ಸೂಚಿಸಿದ್ದಾರೆ. ಭಾರತದ ಮಾಜಿ ಪ್ರಧಾನಿಯವರ ನಿಧನದಿಂದ ತೀವ್ರ ದುಃಖವಾಗಿದೆ. ಡಾ. ಮನಮೋಹನ್ ಸಿಂಗ್ ಜಿ ಕಷ್ಟದ ಸಮಯದಲ್ಲಿ ಭಾರತದ ಆರ್ಥಿಕತೆಯನ್ನು ಪುನರ್ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸೇವೆ ಮತ್ತು ಬುದ್ಧಿವಂತಿಕೆಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು. ಭಾರತದ ಪ್ರಗತಿಗೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾಗಿದ್ದರು. ಮನಮೋಹನ್ ಸಿಂಗ್ ಹೆಸರಾಂತ ಅರ್ಥಶಾಸ್ತ್ರಜ್ಞರಾಗಿದ್ದರು. ಹಣಕಾಸು ಸಚಿವರಾಗಿ ಸೇರಿ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ದೇಶದ ಆರ್ಥಿಕತೆ ಬೆಳೆಯಲು ಭದ್ರವಾದ ಬುನಾದಿ ಹಾಕಿದ್ದರು . ಅವರ ಜೊತೆ ಸಂಸತ್ತಿನಲ್ಲಿ ಕಳೆದ ದಿನಗಳು ಕಣ್ಣಿಗೆ ಕಟ್ಟಿದಂತಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.