ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಖಂಡಿಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಶೋಷಿತ ಸಮುದಾಯಗಳ ಮಹಾಒಕ್ಕೂಟ ಮುಂದಾಗಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ ಮುಖ್ಯಮಂತ್ರಿಗಳನ್ನು ನಿರಂತರವಾಗಿ ಶೋಷಣೆ ಮಾಡುತ್ತಾ ಬಂದಿದ್ದು, ಇದೀಗ ಶೋಷಿತ ಸಮುದಾಯಗಳ ಜನನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿಂದು ಒಕ್ಕೂಟದ ಮುಖಂಡರು ಆರೋಪಿಸಿದ್ದಾರೆ.
ಆಗಸ್ಟ್ 5ರಿಂದ ಎಲ್ಲಾ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಪ್ರತಿಭಟನೆ ಮೆರವಣಿಗೆ ನೀಡಲು ಕರೆ ನೀಡಲಾಗಿದೆ ಎಂದು ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಹೇಳಿದ್ದಾರೆ.ರಾಜ್ಯಪಾಲರು ತಮ್ಮ ನಡೆಯನ್ನು ಹಿಂಪಡೆಯದಿದ್ದರೆ ರಾಜ್ಯಭವನ ಚಲೋ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಹ ತಿಳಿಸಿದ್ದಾರೆ.ಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್ ಸದಸ್ಯರಾದ ಬಿ.ಟಿ.ಲಲಿತಾನಾಯ್ಕ್ ಆದರ್ಶ ಎಲ್ಲಪ್ಪ ಮತ್ತಿತರರು ಹಾಜರಿದ್ದರು.