ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯ ಪಟ್ಟಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಎಫ್ಐಆರ್ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ರಾಜೀನಾಮೆ ಕೋಡೋದೆ ಆದ್ರೆ ಎಫ್ಐಆರ್ ಆಗಿರೋ ಎಲ್ಲಾ ನಾಯಕರು ಕೊಡಲಿ, ಕುಮಾರಸ್ವಾಮಿಯು ಕೊಡಲಿ, ಸ್ವಪಕ್ಷದ ನಾಯಕ ಕುಮಾರಸ್ವಾಮಿ ವಿರುದ್ಧವೇ ಮಾತನಾಡಿದ್ದಾರೆ.
ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ ಎಂದು ಪ್ರಶ್ನಿಸಿರುವ ಅವರು, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? ಎಂದು ಖಾರವಾಗಿಯೇ ಮಾತನಾಡಿದ್ದಾರೆ.