ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಪಕ್ಷದವರೇ ಆದ ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಅವರು, ಸಿಎಂ ರಾಜೀನಾಮೆ ನೀಡಿ ಕಳಂಕ ರಹಿತರಾದ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಹೇಳಿರುವ ಅವರು, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡದೆ ಹೋದಲ್ಲಿ ಬಿಜೆಪಿಯವರು ಮಾಡುತ್ತಿರುವ ಪ್ರತಿಭಟನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿದೆ. ಹೀಗಾಗಿ ಮುಜುಗರದಿಂದ ಪಾರಾಗಲು ರಾಜೀನಾಮೆ ನೀಡಿ ವಿಚಾರಣೆಯಿಂದ ಕಳಂಕರಹಿತರಾಗಿ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.