ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಕಾಲುನೋವಿನಿಂದಾಗಿ ವಿಶ್ರಾಂತಿಗೆ ಜಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ 2025-26ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ನಡೆಸಲು ಮುಂದಾಗಿದ್ದಾರೆ.ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಲಾಖೆವಾರು ಸಭೆ ಆರಂಭಿಸಿದ್ದಾರೆ.
ಇಂದು ಒಳಾಡಳಿತ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಣ್ಣ ಕೈಗಾರಿಕೆ, ಇಂಧನ, ಲೋಕೋಪಯೋಗಿ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಆಹಾರ ನಾಗರಿಕ ಸರಬರಾಜು, ಹಾಗೂ ಗ್ರಾಹಕರ ವ್ಯವಹಾರಗಳು, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಸಹಕಾರ ರೇಷ್ಮೆ ಮತ್ತು ಪಶುಸಂಗೋಪನಾ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಇಂದು ನಡೆದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು.