ಸೂರತ್: ಸೂರತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(CISF)ಗೆ ಸೇರಿದ ಯೋಧ ತನ್ನ ಸರ್ವೀಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಐಎಸ್ಎಫ್ ಯೋಧ ಕಿಸಾನ್ ಸಿಂಗ್(32) ಇಂದು ಮಧ್ಯಾಹ್ನ 2.10 ರ ಸುಮಾರಿಗೆ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೂರತ್ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಜೈಪುರ ಮೂಲದ ಸಿಂಗ್ ಅವರು ತಮ್ಮ ಹೊಟ್ಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡುಮಾಸ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎನ್ವಿ ಭಾರವಾಡ್ ಅವರು ತಿಳಿಸಿದ್ದಾರೆ.
ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಭರ್ವದ್ ಹೇಳಿದ್ದಾರೆ.
ಯೋಧನ ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.