ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿತ್ತು. ಪ್ರಕರಣ ಸಂಬಂಧ, ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಕಚೇರಿಗೆ ಡಿಸೆಂಬರ್ 31ರಂದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದರು ಎಂಬುದು ಈಗ ತಿಳಿದುಬಂದಿದೆ. ಆದರೆ, ಮುಖ್ಯಮಂತ್ರಿಗಳ ಕಚೇರಿಯು ರಾಜ್ಯಪಾಲರ ಪತ್ರಕ್ಕೆ ಪ್ರತಿಕ್ರಿಯೆಯನ್ನೇ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.