ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿ ಸಕ್ರಿಯವಾಗಿರಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಅಧಿಕಾರ ಮುಗಿದ ನಂತರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದಾರೆ.
ಆದರೆ ಅವರು ಚುನಾವಣಾ ರಾಜಕೀಯದಿಂದ ನಿರ್ವತ್ತಿಯಾದರೂ ಬೆಂಬಲಿಗರಿಗೋಸ್ಕರ ರಾಜಕಾರಣದಲ್ಲಿ ಸಕ್ರಿಯವಾಗಿ ಇರಬೇಕು. ಅವರು ನಮಗೆ ಬೇಕು. ಮುಂದಿನ ಚುನಾವಣೆಯಲ್ಲಿ ಅವರ ಮಾರ್ಗದರ್ಶನ ನಮಗೆ ಬೇಕಾಗಿದೆ. ಅವರು ರಾಜಕಾರಣದಲ್ಲಿ ಸಕ್ರಿಯವಾಗಿರಬೇಕು. ಹೊಸ ನಾಯಕತ್ವ ಬರುವರೆಗೂ ನಮಗೆ ಮಾರ್ಗದರ್ಶನ ನೀಡುತ್ತಿರಬೇಕು. ಮುಖ್ಯಮಂತ್ರಿ ಹುದ್ದೆ ಹಂಚಿಕೆ ಬಗ್ಗೆ ನಮಗೇನು ತಿಳಿಯದು ಎಂದು ಹೇಳಿರುವ ಸಚಿವರ ಜಾರಕಿಹೊಳಿಯವರು ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಮುಂದುವರಿಯಬೇಕು ಎಂಬ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.