ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ಆನೇ ಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ.ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣುವಿಜಯರಾಜ್ ಎಂಬುವರು ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಸಿಲಿಂಡರ್ ಸ್ಫೋಟಕ್ಕೆಕಟ್ಟಡದ ಗೋಡೆ ಕಿಟಕಿ ಛಿದ್ರಗೊಂಡಿದ್ದು, ಅಕ್ಕಪಕ್ಕದ ಮೂರ್ನಾಲ್ಕು ಕಟ್ಟಡಗಳಿಗೂ ಹಾನಿಯುಂಟಾಗಿದೆ.ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.