ಬೆಂಗಳೂರು: ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೇಗೌಡ ಅವರು ಶಂಕಾಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಗರದ ಹೊರವಲಯದ ಬಿಡದಿ ಬಳಿ ನಡೆದಿದೆ.
ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಬಿಡದಿ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಕಂಡ ಸ್ಥಳೀಯರು ನೀಡಿದ ಮಾಹಿತಿಯನ್ನು ಆಧರಿಸಿ ಬಿಡದಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಕೈಗೊಂಡು ಪ್ರಕರಣ ದಾಖಲಿಸಿದ್ದಾರೆ.ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ