ದೇವನಹಳ್ಳಿ : ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಸಿಸಿ ರಸ್ತೆ ನಿರ್ಮಾಣದ ಭೂಮಿ ಪೂಜೆಯ ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿ ಇದು ಸುಮಾರು 18 ಲಕ್ಷ ರೂಪಾಯಿಗಳ ಕಾಮಗಾರಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಸಿಸಿ ರಸ್ತೆಯ ವ್ಯವಸ್ಥೆ ಕಲ್ಪಿಸಿ ರೈತರಿಗೆ ಗ್ರಾಮಸ್ಥರಿಗೆ ಅವಶ್ಯಕವಾದ ಸಾರಿಗೆ ಸಂಪರ್ಕಕ್ಕೆ ಉತ್ತಮ ಅವಕಾಶವನ್ನು ಕಲ್ಪಿಸುವ ಸದುದ್ದೇಶವಾಗಿದೆ ಎಂದರು.ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ರಾಜಣ್ಣ, ಬಯ್ಯಪ್ಪ ಅಧ್ಯಕ್ಷರಾದ ವಿ. ಶಾಂತಕುಮಾರ್, ರಾಮಚಂದ್ರಪ್ಪ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.