ದೊಡ್ಡಬಳ್ಳಾಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಹೇಳಿಕೆಗಳನ್ನು ಖಂಡಿಸಿ ತಾಲ್ಲೂಕು ಕಚೇರಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಅಭಿವೃದ್ಧಿ ಮರೆತು ಸಂವಿಧಾನ ವಿರೋಧಿ ಯಾಗಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದವರ ಪ್ರಶ್ನೆಗಳಿಗೆ ಉತ್ತರ ನೀಡುವುದರಿಂದ ತಪ್ಪಿಸಿಕೊಳ್ಳಲು ಪ್ರಚೋಧನಕಾರಿ ಹೇಳಿಕೆ ನೀಡಿ ಕಲಾಪದಲ್ಲಿ ವಿನಾಕಾರಣ ಗದ್ದಲಉಂಟುಮಾಡಲಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ
ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜ್, ಜಿ.ಲಕ್ಷ್ಮೀಪತಿ, ಭೂ ನ್ಯಾಯ ಮಂಡಳಿ ಸದಸ್ಯ ಅದಿತ್ಯ ನಾಗೇಶ್ ದೂರಿದರು.
ಬಿಜೆಪಿ ಮುಖಂಡರು ಅಂಬೇಡ್ಕರ್ ಕುರಿತು ಪ್ರಜಾಪ್ರಭುತ್ವದ ದೇಗುಲವೆಂದೇ ಕರೆಯುವ ರಾಜ್ಯಸಭೆಯಲ್ಲಿ ಅವಹೇಳನಕಾರಿಯಾಗಿ ಮಾತ ನಾಡಿರುವುದು ಸಂವಿಧಾನ ವಿರೋಧಿಯಾಗಿದೆ. ಈ ಕೂಡಲೇ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಎಂದು ಆಗ್ರಹಿಸಿದರು.ರಾಜ್ಯದ ಮಹಿಳೆಯರ ಪ್ರತಿಧಿಯಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ಧ ವಿಧಾನ ಪರಿಷತ್ನಲ್ಲಿ ಅಗೌರವ ಯುತವಾಗಿ ಮಾತನಾಡುವ ಮೂಲಕ ರಾಜ್ಯದ ಮಹಿಳಾ ಸಮುದಾಯವನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಿಂಧಿಸಿದ್ದಾರೆ.
ಹಿಂದೂತ್ವದ ಬಗ್ಗೆ ಮಾತನಾಡುವ ಸಿ.ಟಿ.ರವಿ ಅವರಿಗೆ ಮಹಿಳೆಯರ ಬಗ್ಗೆ ಗೌರವ ಇಲ್ಲದೆ ಇರುವವರು ಹಿಂದೂತ್ವ ಪ್ರತಿಪಾಧನೆಗೆ ಆನರ್ಹರು ಎಂದು ಟೀಕಿಸಿದರು.
ಬುದ್ಧಿವಂತರ ವೇದಿಕೆಯೆಂದೇ ಹೆಸರಾಗಿರುವ ವಿಧಾನ ಪರಿಷತ್ನಲ್ಲಿ ಮಹಿಳಾ ಸಚಿವರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿರುವುದು ನಾಚಿಕೆಗೇಡಿನ ಸಂಗತಿ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಇಡೀ ಮಹಿಳಾ ಸಮುದಾಯ ಅವಮಾನ ಮಾಡಿದಂತಾಗಲಿದೆ ಎಂದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನಾಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿವೆಂಕಟೇಶ್, ಟಿಎಪಿಎಂಸಿಎಸ್ ಅಧ್ಯಕ್ಷ ಎಂ.ವೆಂಕಟೇಶ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ,ನಿರ್ದೇ ಶಕ ಅಂಜನಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ವಿಶ್ವನಾಥರೆಡ್ಡಿ, ಕಾಂಗ್ರೆಸ್ ಮಹಿಳಾ ಘಟಕದ ಮುಖಂಡರಾದ ರೇವತಿ ಅನಂತರಾಮ್, ಮೀನಾಕ್ಷಿ, ನಗರಸಭೆ ಸದಸ್ಯರಾದ ಎಚ್.ಎಸ್.ಶಿವಶಂಕರ್, ಆನಂದ್, ನಾಗರಾಜ್, ಅಖಿಲೇಶ್, ವಾಣಿ, ಮುಖಂಡರಾದ ಮುನಿಕೃಷ್ಣಪ್ಪ, ಬಷೀರ್, ರಘುನಂದನ್ ಇದ್ದರು.