ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ, ರಾಜಕಾರಣಿಯೂ ಆಗಿರುವ ಮೋಹನ್ ಬಾಬು, ಇತ್ತೀಚೆಗೆ ವರದಿಗೆಂದು ತೆರಳಿದ್ದ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ಮಾಡಿದ್ದರು. ಮೋಹನ್ ಬಾಬು ಈ ಅವರ ರೌಡಿ ವರ್ತನೆಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಸಹ ನಡೆದಿದ್ದವು. ಇದೀಗ ಮೋಹನ್ ಬಾಬು ಅವರು ಸುದ್ದಿವಾಹಿನಿಗೆ ಕ್ಷಮೆ ಕೇಳಿದ್ದಾರೆ.
“ನನ್ನ ಕುಟುಂಬಕ್ಕೆ ಸಂಬಂಧಿಸಿದ ಘಟನೆ ಇಷ್ಟು ದೊಡ್ಡ ವಿಷಯವಾಗಿ ಸುದ್ದಿವಾಹಿನಿ ಮತ್ತು ಪತ್ರಕರ್ತರನ್ನು ಸಂಕಷ್ಟಕ್ಕೆ ದೂಡಿದ್ದಕ್ಕೆ ನನಗೆ ವಿಷಾದವಿದೆ. ಘಟನೆಯ ನಂತರ 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದ ಕಾರಣ ನಾನು ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ಅಂದು ನಡೆದ ಘಟನೆಯಲ್ಲಿ ಪತ್ರಕರ್ತರೊಬ್ಬರು ಗಾಯಗೊಂಡಿರುವುದು ತುಂಬಾ ಬೇಸರದ ಸಂಗತಿ. ನಾನು ಅವರ ಕುಟುಂಬ ಮತ್ತು ಸುದ್ದಿವಾಹಿನಿ ಕುಟುಂಬಕ್ಕೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.